Posts

Showing posts from June, 2012

Bradbury, Ray pedestrian ಕತೆಯ ಅನುವಾದ 'ಪಾದಚಾರಿ' ನನ್ನ version..,

ಪಾದಚಾರಿ ಮಾರ್ಗದಲ್ಲಿ ಆತ ಸಾಗುತ್ತಿದ್ದ., ಪೋಲಿಸರಿಬ್ಬರು ಆತನನ್ನು ತಡೆದರು. ಆತ ಯಾರು ಏನು ಎಂಬ ಹಲವು ಪ್ರಶ್ನೆಗಳನ್ನು ಕೇಳಿದ ನಂತರ ಆತ  ಮಾನಸಿಕ ಅಸ್ವಸ್ಥ  ಎಂಬ ಹಣೆ ಪಟ್ಟಿ ಹಚ್ಚಿ ಮಾನಸಿಕ ಆಸ್ಪತ್ರೆಗೆ ಸಾಗಿಸಿದರು. ಹಿನ್ನೆಲೆ : ಲಿಯೋನರ್ಡ್ ಮೀಡ್ ನಿಗೆ ಸಂಜೆಗತ್ತಲಲ್ಲಿ ನಿರ್ಮಾನುಷ ಬೀದಿಗಳಲ್ಲಿ ಸುತ್ತಾಡುವ ಆಸೆ. ಆತನಿಗೆ ಕುಳಿರ್ಗಾಳಿಗೆ ಮೈ ಒಡ್ಡಿ ನಡೆಯುವುದೇ ಒಂದು ಹಿತ. ಆದರೆ ಯಾವ ಮನುಷ್ಯ ಪ್ರಾಣಿಗಳೂ ಸಹ ಸೂರ್ಯಾಸ್ತದ ನಂತರ ಮನೆಯಿಂದ ಕಾಲಿಡುವ ಕಾಲವೇ ಅದಾಗಿರಲಿಲ್ಲ. ಸಂಜೆಯ ನಂತರ ಟೀವಿ ನೋಡುತ್ತಾ ಕಳೆಯುವುದೇ ಸಹಜವೆನ್ನುವ ವಾತಾವರಣ ಸೃಷ್ಟಿಯಾಗಿತ್ತು. ಜನರು ತಮ್ಮ ಸೃಜನಶೀಲತೆಯನ್ನು ಮರೆತು ಯಾರದೋ ಕಲ್ಪನೆಯ ಕೂಸಿನ ಸೀರಿಯಲ್ಲುಗಳನ್ನ ನೋಡಿ ಆನಂದಿಸುತ್ತಿದ್ದರು. ಮುಗೀತು ಮುಗೀತು ಅಂದರೂ ಮುಗಿಯದ ಕೋರ್ಟ್ ಸೀನುಗಳನ್ನು ನೋಡಿ ಸೀನುತ್ತಿದ್ದರು, ಆಕಳಿಸುತ್ತಿದ್ದರು. ಈ ಹಿಂದೆ ಮೀಡ್ ನ ಅಜ್ಜ ಆತ ಸಣ್ಣವನಿದ್ದಾಗ ಹೇಳಿದ ಕತೆಯ ಪ್ರಕಾರ ಮೀಡ್ ನ  ಅಜ್ಜನ ಕಾಲದಲ್ಲಿ ಜನ ನಡೆದುಕೊಂಡೇ ಓಡಾಡುತ್ತಿದ್ದರು, ವಾಹನಗಳ, ಲಿಫ್ಟುಗಳ ಮೇಲೆ ಅವಲಂಬಿತರಾಗದೇ ಸಿಟಿ ಬಸ್ಸುಗಳಲ್ಲಿ, ಟ್ರೈನ್ ಗಳಲ್ಲಿ ನೇತಾಡದೆ ಹೆಜ್ಜೆ ಮೇಲೆ ಹೆಜ್ಜೆಯನಿಟ್ಟು ಸಾಗುತ್ತಿದ್ದರು. ಆದ್ರೆ ಮೀಡ್ ನು ಬದುಕುತ್ತಿರುವ ಈ ಕಾಲದಲ್ಲಿ ಜನ ನಡೆಯುವುದೇ ಇಲ್ಲ. ಬೊಜ್ಜಿಗೆ, ರೋಗಗಳಿಗೆ ಮದ್ದಿದೆ ಹಾಗು ಮದ್ದಿಗೆ ಜನರ ಬಳಿ ದುಡ್ಡಿದೆ. ಜನರು ತಮ್ಮ ಅವಯವಗಳಿಂದ ಬೆವರು